ಧರ್ಮೋಪದೇಶಕಾಂಡ 32:47 - ಪರಿಶುದ್ದ ಬೈಬಲ್47 ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.