Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:7 - ಪರಿಶುದ್ದ ಬೈಬಲ್‌

7 “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಪೂರ್ವಿಕರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು; ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:7
17 ತಿಳಿವುಗಳ ಹೋಲಿಕೆ  

ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


“ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.


ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. ಅವು ನನ್ನನ್ನು ಸಂತೈಸುತ್ತವೆ.


ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?


ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.


‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ,


ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು