16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.
ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.
ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”
ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.
ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.
ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.