ಧರ್ಮೋಪದೇಶಕಾಂಡ 33:17 - ಪರಿಶುದ್ದ ಬೈಬಲ್17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.” ಅಧ್ಯಾಯವನ್ನು ನೋಡಿ |
ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.