ಧರ್ಮೋಪದೇಶಕಾಂಡ 33:2 - ಪರಿಶುದ್ದ ಬೈಬಲ್2 ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು. ಅಧ್ಯಾಯವನ್ನು ನೋಡಿ |
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.