ಧರ್ಮೋಪದೇಶಕಾಂಡ 33:21 - ಪರಿಶುದ್ದ ಬೈಬಲ್21 ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವಾಸ್ತ್ಯವು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲ್ಯರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.” ಅಧ್ಯಾಯವನ್ನು ನೋಡಿ |