ಧರ್ಮೋಪದೇಶಕಾಂಡ 33:23 - ಪರಿಶುದ್ದ ಬೈಬಲ್23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.” ಅಧ್ಯಾಯವನ್ನು ನೋಡಿ |