ಧರ್ಮೋಪದೇಶಕಾಂಡ 33:29 - ಪರಿಶುದ್ದ ಬೈಬಲ್29 ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.” ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!