Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:3 - ಪರಿಶುದ್ದ ಬೈಬಲ್‌

3 ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:3
31 ತಿಳಿವುಗಳ ಹೋಲಿಕೆ  

ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.


ದೇವರು, “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.


ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.


ನನ್ನ ಜೀವವು ನಿನ್ನ ಕೈಯಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


“ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು