ಧರ್ಮೋಪದೇಶಕಾಂಡ 33:8 - ಪರಿಶುದ್ದ ಬೈಬಲ್8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.