ಧರ್ಮೋಪದೇಶಕಾಂಡ 33:9 - ಪರಿಶುದ್ದ ಬೈಬಲ್9 ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.