ಧರ್ಮೋಪದೇಶಕಾಂಡ 34:1 - ಪರಿಶುದ್ದ ಬೈಬಲ್1 ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು [ಕಾನಾನ್] ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದವರೆಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ ಅಧ್ಯಾಯವನ್ನು ನೋಡಿ |
ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.