Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:11 - ಪರಿಶುದ್ದ ಬೈಬಲ್‌

11 ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಐಗುಪ್ತ ದೇಶದಲ್ಲಿ ಫರೋಹನ ಮುಂದೆಯೂ ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಯೆಹೋವನು ಅವನನ್ನು ಕಳುಹಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:11
8 ತಿಳಿವುಗಳ ಹೋಲಿಕೆ  

ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು.


ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು