ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.