ಧರ್ಮೋಪದೇಶಕಾಂಡ 34:4 - ಪರಿಶುದ್ದ ಬೈಬಲ್4 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |