Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:5 - ಪರಿಶುದ್ದ ಬೈಬಲ್‌

5 ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ದೇಹಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:5
13 ತಿಳಿವುಗಳ ಹೋಲಿಕೆ  

ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ.


ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು