Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:6 - ಪರಿಶುದ್ದ ಬೈಬಲ್‌

6 ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ [ಯೆಹೋವನು] ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನವರೆಗೆ ಯಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:6
3 ತಿಳಿವುಗಳ ಹೋಲಿಕೆ  

ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


“ಅಂತೆಯೇ ನಾವು ಬೇತ್‌ಪೆಗೋರಿನ ಎದುರಿಗಿರುವ ಕಣಿವೆಯಲ್ಲಿ ಇಳಿದುಕೊಂಡೆವು.”


ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು