Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:9 - ಪರಿಶುದ್ದ ಬೈಬಲ್‌

9 ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟದರಿಂದ ಅವನು ಜ್ಞಾನವರ ಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲ್ಯರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:9
20 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.


ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು