ಧರ್ಮೋಪದೇಶಕಾಂಡ 4:1 - ಪರಿಶುದ್ದ ಬೈಬಲ್1 “ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.