ಧರ್ಮೋಪದೇಶಕಾಂಡ 4:10 - ಪರಿಶುದ್ದ ಬೈಬಲ್10 ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಸಂಗತಿಗಳು ಯಾವವಂದರೆ - ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ - ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ ಎಂದು ಹೇಳಿದ ದಿನದ ವಿಷಯಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.