ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.
“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.
ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.
ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.
ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.
ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.
ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.
ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.
ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.