Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:13 - ಪರಿಶುದ್ದ ಬೈಬಲ್‌

13 ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:13
18 ತಿಳಿವುಗಳ ಹೋಲಿಕೆ  

ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.


ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.


ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.


ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.


ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು