Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:15 - ಪರಿಶುದ್ದ ಬೈಬಲ್‌

15 “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:15
22 ತಿಳಿವುಗಳ ಹೋಲಿಕೆ  

ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.


ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು.


“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.


ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.


‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.


ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.


ಆ ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ.


ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.


ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.


ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು