Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:19 - ಪರಿಶುದ್ದ ಬೈಬಲ್‌

19 ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:19
30 ತಿಳಿವುಗಳ ಹೋಲಿಕೆ  

ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ


ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”


‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”


ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.


ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ನೀರಿನಲ್ಲಿ ಈಜಾಡುವ ಮೀನುಗಳ ರೂಪವನ್ನಾಗಲಿ ಮಾಡಿಕೊಳ್ಳಬೇಡಿ.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವುದಿಲ್ಲ.


ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.


ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.


ಅವುಗಳ ಮಾತಾಗಲಿ ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು