Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:20 - ಪರಿಶುದ್ದ ಬೈಬಲ್‌

20 ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:20
24 ತಿಳಿವುಗಳ ಹೋಲಿಕೆ  

ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


“ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು.


ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು