Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:27 - ಪರಿಶುದ್ದ ಬೈಬಲ್‌

27 ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:27
23 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


“ಮೆಷಕ್, ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನು ಉಂಟುಮಾಡಿದ್ದರು.


ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.


ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’


ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.


ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.


“ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”


ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು.


ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.


“ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.


ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು