ಧರ್ಮೋಪದೇಶಕಾಂಡ 4:28 - ಪರಿಶುದ್ದ ಬೈಬಲ್28 ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ. ಅಧ್ಯಾಯವನ್ನು ನೋಡಿ |
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.