ಧರ್ಮೋಪದೇಶಕಾಂಡ 4:32 - ಪರಿಶುದ್ದ ಬೈಬಲ್32 “ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದೇವರು ಮನುಷ್ಯರನ್ನು ಸೃಷ್ಟಿಸಿ ಭೂವಿುಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಅಂಥ ದೊಡ್ಡ ಕಾರ್ಯವು ನಡೆದದ್ದುಂಟೋ, ಇಲ್ಲವೆ ಅಂಥದರ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ? ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.