ಧರ್ಮೋಪದೇಶಕಾಂಡ 4:33 - ಪರಿಶುದ್ದ ಬೈಬಲ್33 ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ? ಅಧ್ಯಾಯವನ್ನು ನೋಡಿ |
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.