Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:35 - ಪರಿಶುದ್ದ ಬೈಬಲ್‌

35 ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:35
33 ತಿಳಿವುಗಳ ಹೋಲಿಕೆ  

ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.


“‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು.


ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ.


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.


ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.


ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.


ಯೆಹೋವನೇ, ನಿನಗೆ ಸಮಾನರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಬೇರೆ ದೇವರಿಲ್ಲ. ಇಂಥ ಮಹತ್ಕಾರ್ಯ ಮಾಡುವ ದೇವರ ಬಗ್ಗೆ ನಾವು ಕೇಳಿಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು