ಧರ್ಮೋಪದೇಶಕಾಂಡ 4:36 - ಪರಿಶುದ್ದ ಬೈಬಲ್36 ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ. ಅಧ್ಯಾಯವನ್ನು ನೋಡಿ |