Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:37 - ಪರಿಶುದ್ದ ಬೈಬಲ್‌

37 “ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:37
32 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.


ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.


ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು