Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:38 - ಪರಿಶುದ್ದ ಬೈಬಲ್‌

38 ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:38
14 ತಿಳಿವುಗಳ ಹೋಲಿಕೆ  

“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.


“ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಬೇರೆ ಎರಡೂವರೆ ಕುಲಗಳವರು ಅಂದರೆ ರೂಬೇನ್ ಕುಲ ಮತ್ತು ಗಾದ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಜೆರಿಕೊ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ತ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ.”


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಅವರನ್ನು ನಾಶಮಾಡದೆ ಹೋದದ್ದಕ್ಕೆ ಈಗ ಅವರು ಮಾಡುತ್ತಿರುವುದನ್ನು ನೀನೇ ನೋಡು. ನೀನು ನಮಗೆ ಕೊಟ್ಟ ದೇಶದಿಂದ ನಮ್ಮನ್ನು ಹೊರಡಿಸಲು ಬಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು