Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:39 - ಪರಿಶುದ್ದ ಬೈಬಲ್‌

39 “ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:39
24 ತಿಳಿವುಗಳ ಹೋಲಿಕೆ  

ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.


ಯೆಹೋವನೇ, ನಿನಗೆ ಸಮಾನರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಬೇರೆ ದೇವರಿಲ್ಲ. ಇಂಥ ಮಹತ್ಕಾರ್ಯ ಮಾಡುವ ದೇವರ ಬಗ್ಗೆ ನಾವು ಕೇಳಿಯೇ ಇಲ್ಲ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು