ಧರ್ಮೋಪದೇಶಕಾಂಡ 4:4 - ಪರಿಶುದ್ದ ಬೈಬಲ್4 ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.