Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:40 - ಪರಿಶುದ್ದ ಬೈಬಲ್‌

40 ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:40
34 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”


ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


“ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು!


ನೀವು ತಾಯಿಪಕ್ಷಿಯನ್ನು ಬಿಟ್ಟು ಮರಿಪಕ್ಷಿಗಳನ್ನು ಕೊಂಡೊಯ್ಯಬಹುದು. ಈ ನಿಯಮಗಳನ್ನು ನೀವು ಪಾಲಿಸಿದರೆ ನೀವು ಬಹುಕಾಲ ಬದುಕುವಿರಿ ಮತ್ತು ನಿಮಗೆ ಶುಭವಾಗುವುದು.


ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.


ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.


ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.


ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು