Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:41 - ಪರಿಶುದ್ದ ಬೈಬಲ್‌

41 ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದ ಮೂರು ಆಶ್ರಯನಗರಗಳನ್ನು ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆ ಕಾಲದಲ್ಲಿ ಮೋಶೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆ ಕಾಲದಲ್ಲಿ ಮೋಶೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯನಗರಗಳನ್ನು ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:41
7 ತಿಳಿವುಗಳ ಹೋಲಿಕೆ  

ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.


ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.


ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು.


ಆದ್ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.


“ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು