Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:46 - ಪರಿಶುದ್ದ ಬೈಬಲ್‌

46 ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಜೋರ್ಡನ್ ನದಿಯ ಆಚೆ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸ ಸೀಹೋನನ ದೇಶದಲ್ಲಿ ಇದು ನಡೆಯಿತು. ಮೋಶೆಯೂ ಇಸ್ರಯೇಲರೂ ಈಜಿಪ್ಟಿನಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:46
14 ತಿಳಿವುಗಳ ಹೋಲಿಕೆ  

“ಅಂತೆಯೇ ನಾವು ಬೇತ್‌ಪೆಗೋರಿನ ಎದುರಿಗಿರುವ ಕಣಿವೆಯಲ್ಲಿ ಇಳಿದುಕೊಂಡೆವು.”


ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು.


“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.


ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.


ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.


ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.


ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.


ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.


ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:


ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.


ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು