Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:48 - ಪರಿಶುದ್ದ ಬೈಬಲ್‌

48 ಈ ಪ್ರದೇಶವು ಅರ್ನೋನ್ ತಗ್ಗಿನಲ್ಲಿರುವ ಅರೋಯೇರಿನಿಂದ ಹಿಡಿದು ಸೀಯೋನ್ ಎಂಬ ಹೆರ್ಮೋನ್ ಪರ್ವತದ ತನಕ ವಿಸ್ತರಿಸಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲ್ಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅರ್ನೋನ್ ನದಿಯ ತೀರದಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸಿರ್ಯೋನ ಪರ್ವತದವರೆಗೂ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:48
7 ತಿಳಿವುಗಳ ಹೋಲಿಕೆ  

(ಚೀದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿರ್ಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.)


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.


“ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.


ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ್ಯು ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.


“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು