ಧರ್ಮೋಪದೇಶಕಾಂಡ 4:7 - ಪರಿಶುದ್ದ ಬೈಬಲ್7 “ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು? ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.