Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:9 - ಪರಿಶುದ್ದ ಬೈಬಲ್‌

9 ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:9
47 ತಿಳಿವುಗಳ ಹೋಲಿಕೆ  

ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.


ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಅನಂತರ ಯೆಹೋಶುವನು ಜನರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಹೀಗೆ ಹೇಳಬೇಕು:


ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.


“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.


ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.


ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.


“ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.


ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


“ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’


“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.


ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.


ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು