Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:12 - ಪರಿಶುದ್ದ ಬೈಬಲ್‌

12 ‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:12
11 ತಿಳಿವುಗಳ ಹೋಲಿಕೆ  

ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.


ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.


“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.


ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.


ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.


ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು