Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:14 - ಪರಿಶುದ್ದ ಬೈಬಲ್‌

14 ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು ಹೆಣ್ಣುಮಕ್ಕಳು ಗಂಡಾಳು ಹೆಣ್ಣಾಳು ಎತ್ತು ಕತ್ತೆ ಪಶುಗಳು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:14
13 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.”


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.


“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.


ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.


ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು