ಧರ್ಮೋಪದೇಶಕಾಂಡ 5:16 - ಪರಿಶುದ್ದ ಬೈಬಲ್16 ‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು. ಅಧ್ಯಾಯವನ್ನು ನೋಡಿ |