ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.