Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:24 - ಪರಿಶುದ್ದ ಬೈಬಲ್‌

24 ‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:24
12 ತಿಳಿವುಗಳ ಹೋಲಿಕೆ  

ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ.


ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.


ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.


“ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ಯೆಹೋವನ ಹೆಸರಿನಲ್ಲಿ ಮಾತಾಡುವಂತೆ ಮಾಡಿದ ದೇವರಿಗೆ ಸ್ತೋತ್ರ!


ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು