25 ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”
ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.
ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.
‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.