ಧರ್ಮೋಪದೇಶಕಾಂಡ 5:26 - ಪರಿಶುದ್ದ ಬೈಬಲ್26 ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು? ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.