ಧರ್ಮೋಪದೇಶಕಾಂಡ 5:29 - ಪರಿಶುದ್ದ ಬೈಬಲ್29 ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.” ಅಧ್ಯಾಯವನ್ನು ನೋಡಿ |