31 ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
31 ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
31 ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.
31 ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.
31 ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.”
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”
“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.
“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.
“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.
“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.
ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.